ಬೆಂಗಳೂರು: ವಿಧಾನ ಪರಿಷತ್ತಿಗೆ ಸಿಎಂ ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಸೇರಿ ಪಕ್ಷದ ನಾಲ್ವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, NRI ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಸಾಗರ್ ಅವರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಪಡೆದ ವಿಧಾನಪರಿಷತ್ ಸದಸ್ಯರಾಗಿ ಈ ನಾಲ್ವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.