ಚಿತ್ರದುರ್ಗ: ಚಿತ್ರದುರ್ಗದಲ್ಲಿ ಹೈಡ್ರಾಮವೊಂದು ನಡೆದಿದ್ದು, 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ.
ಹೌದು, ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ 2ನೇ ಮದುವೆಗೆ ಸಿದ್ಧವಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟಿರುವ ಘಟನೆ ನಡೆದಿದೆ. 4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಮದುವೆಯಾಗಿದ್ದರು. ಆದರೆ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ.
ಕಾರ್ತಿಕ್ ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ಮೊದಲ ಪತ್ನಿ ತನುಜಾಗೆ ಗೊತ್ತಾಗಿದ್ದು, ಕುಟುಂಬಸ್ಥರೊಂದಿಗೆ ಚಿತ್ರದುರ್ಗದ ಗಾಯಿತ್ರಿ ಕಲ್ಯಾಣ ಮಂಟಪಕ್ಕೆ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.