ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೆಬ್ಬಾಳದ ಕಲ್ಯಾಣಗರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಗಂಡ-ಹೆಂಡತಿ ಹಾಗೂ ಮಕ್ಕಳು ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.