ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 61 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ದೃಢ ಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 325 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 61 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರುವುದಾಗಿ ತಿಳಿಸಿದೆ.
ಇಂದು ಸೋಂಕಿತರಾದಂತ ನಾಲ್ವರು ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 423 ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದೆ.