Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
KARNATAKA

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

ಮೈಸೂರು : ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ ಎಂದರು. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ

ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಪಿಎಆರ್ ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು.

ಕಾಲ್ತುಳಿತದ ಘಟನೆ ಸರ್ಕಾರಕ್ಕೆ ನೋವು ತಂದಿದೆ

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು.

ಕ್ರೀಡಾಂಗಣ ಸ್ಥಳಾಂತರದ ಬಗ್ಗೆ ಪರಿಶೀಲಿಸಿ ತೀರ್ಮಾನ

ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎಂದರು.

ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

ಈ ಪ್ರಕರಣದಲ್ಲಿ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲ. ಆದರೆ ಘಟನೆ ದು:ಖ ತಂದಿದೆ ಎಂದರು.

ಬಿಜೆಪಿಯ ಇಂತಹ ಇಬ್ಬದಿತನದ ನಿಲುವು

ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಪತ್ರ ಬರೆದಿದ್ದಾರೆ. ಆದರೆ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ರಾಜ್ಯ ಬಿಜೆಪಿಯ ಇಂತಹ ಇಬ್ಬದಿತನದ ನಿಲುವು ತೋರುತ್ತದೆ ಎಂದರು.

ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ

ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ? ಎಂದು ಮರುಪ್ರಶ್ನಿಸಿದರು.

ಸುಹಾಸ್ ಶೆಟ್ಟಿ ಪ್ರಕರಣದಲ್ಲಿ, ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ದಸರಾ ಪೂರ್ವಭಾವಿ ಸಭೆ ಹಾಗೂ ಕೆಡಿಪಿ ಸಭೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಸೂರಿನಲ್ಲಿ ಕೆಡಿಪಿ ಹಾಗೂ ದಸರಾ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ನರೇಗಾ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಏನ್ ಡಿ ಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಯಸಿದಾಗ ರಾಜ್ಯಗಳು ಹಣ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದರು

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.