ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಮಾಲ್ ಆಫ್ ಏಷಿಯಾ ಮುಂಭಾಗದ ರಸ್ತೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
KIAL ಏರ್ ಪೋಟ್ ರಸ್ತೆಯ ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಯುವಕನ ಶವ ಪತ್ತೆಯಾಗಿದೆ. ಅದೇ ಫ್ಲೈಓವರ್ ಕೆಳಗೆ ಬೈಕ್ ಸಹ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.