ಮಂಡ್ಯ: ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಸಮೀಪ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿಯಾದ ಕಾರು ಎದುರಿಗೆ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.