ವಿಜಯಪುರ: ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿಜಯಪುರದಲ್ಲಿ ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಮನೆ ಮೇಲ್ಛಾವಣಿ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಅವಸೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಸಂಗೀತಾ ಬಾಳಾಸಾಹೇಬ್ ಪಾಟೀಲ್ (30) ಮೃತ ಮಹಿಳೆ.
ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಮಕ್ಕಳು ಮನೆಯಿಂದ ಹೊರಬಂದು ಪಾರಾಗಿದ್ದಾರೆ. ಸ್ಥಳೀಯರು ಮಣ್ಣಿನಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಅವರ ಮೃತದೇಹ ಹೊರತೆಗೆದಿದ್ದಾರೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.