ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ ಬರೋಬ್ಬರಿ 265 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 650 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 265 ಜನರಿಗೆ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದಿದೆ.
ಕಳೆದ 24 ಗಂಟೆಯಲ್ಲಿ 265 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದರೇ, 126 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 559 ಸಕ್ರೀಯ ಸೋಂಕಿತರು ರಾಜ್ಯದಲ್ಲಿದ್ದಾರೆ. ಇವರಲ್ಲಿ 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 552 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದೆ.
Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast
ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ