ಬೆಂಗಳೂರು: ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿ ಮಾನದಂಡ ಪರಿಷ್ಕರಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯಡಿ ವಾರ್ಷಿಕ ವಿದ್ಯುತ್ ಬಳಕೆಯ ಸರಾಸರಿ ಮಾನದಂಡ ಪರಿಷ್ಕರಿಸುವುದಿಲ್ಲ,ಆದರೆ ಯೋಜನೆ ಫಲಾನುಭವಿಗಳು ಪಿಎಂ ಸೂರ್ಯಘರ್ ಯೋಜನೆಯ ಲಾಭಪಡೆಯಬಹುದೆಂದು ಮಾಹಿತಿ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಕುಸುಮ್-ಸಿ ಯೋಜನೆ ಮೂಲಕ ಡಿಸೆಂಬರ್ ವೇಳೆಗೆ 2,400 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ