Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಜೂ.30 ಕ್ಕೆ `ನಾಡಪ್ರಭು ಕೆಂಪೇಗೌಡ ಜಯಂತಿ’ ಆಚರಣೆ |Kempe gowda jayanti
KARNATAKA

BIG NEWS : ರಾಜ್ಯ ಸರ್ಕಾರದಿಂದ ಜೂ.30 ಕ್ಕೆ `ನಾಡಪ್ರಭು ಕೆಂಪೇಗೌಡ ಜಯಂತಿ’ ಆಚರಣೆ |Kempe gowda jayanti

By kannadanewsnow5710/06/2025 12:39 PM

ಜೂನ್ 27 ರಂದು ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ದೇವನಹಳ್ಳಿಯ ಆವತಿ ಗ್ರಾಮದಿಂದ ಜ್ಯೋತಿ ಹೊರಡಲಿದ್ದು ಜೂನ್ 30 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಹಿನ್ನೆಲೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಲಾಗಿದ್ದು ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಬೆಳಿಗ್ಗೆ 08:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ.

ಜೂನ್ 27 ರಂದು ಕೆಂಪೇಗೌಡ ಜ್ಯೋತಿ ರಥ ಯಾತ್ರೆ ಕಾರ್ಯಕ್ರಮ ಇರುವುದರಿಂದ, ಆ ದಿನ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಬೇಕಿದೆ. ಹಾಗಾಗಿ ಜಿಲ್ಲಾ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂನ್ 30 ರಂದು ಆಚರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪುತ್ಥಳಿ, ವೇದಿಕೆ ಅಲಂಕಾರ ವ್ಯವಸ್ಥೆ, ಕುಡಿಯುವ ನೀರು, ಊಟೋಪಚಾರ ಸುವ್ಯವಸ್ಥಿತವಾಗಿ ಆಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ, ಎಸ್ಸೆಸ್ಸೆಲ್ಸಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲಾಗುವುದು ಅದಕ್ಕಾಗಿ ಪಟ್ಟಿ ಸಿದ್ಧಪಡಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಗೆ ಸೂಚಿಸಿದರು.ಜಿಲ್ಲಾ ಮಟ್ಟದ ಕಾರ್ಯಕ್ರಮ ದಿನದಂದು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆ ಹೊರಡಲಿದ್ದು ತಾಲ್ಲೂಕು ಇಒ ಹಾಗೂ ತಹಶೀಲ್ದಾರ್ ಗಳು ಅಗತ್ಯ ಕ್ರಮ ವಹಿಸಿ ಎಂದರು.

ಕೆಂಪೇಗೌಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

BIG NEWS: State government to celebrate 'Nadaprabhu Kempegowda Jayanti' on June 30 | Kempe gowda jayanti
Share. Facebook Twitter LinkedIn WhatsApp Email

Related Posts

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM1 Min Read

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM1 Min Read

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM2 Mins Read
Recent News

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರ: ರೋಹಿತ್ ಶರ್ಮಾ ದಾಖಲೆ ಪುಡಿಪುಡಿ ಮಾಡಿದ ‘ಕಿಂಗ್ ಕೊಹ್ಲಿ’!

05/04/2026 9:15 PM
State News
KARNATAKA

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

By kannadanewsnow0905/04/2026 9:28 PM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು…

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

05/04/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.