Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

BREAKING: ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್‌ ನಿರ್ದೋಷಿ:ಹೈಕೋರ್ಟ್‌ನಿಂದ ಮಹತ್ವದ ತೀರ್ಪು

07/03/2026 11:07 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `SSLC ಪರೀಕ್ಷೆ-2′ ಫಲಿತಾಂಶ ಪ್ರಕಟ : ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಚಿವ ಮಧು ಬಂಗಾರಪ್ಪ ಸಂತಸ
KARNATAKA

BREAKING : `SSLC ಪರೀಕ್ಷೆ-2′ ಫಲಿತಾಂಶ ಪ್ರಕಟ : ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಸಚಿವ ಮಧು ಬಂಗಾರಪ್ಪ ಸಂತಸ

By kannadanewsnow5713/06/2025 12:57 PM

ಬೆಂಗಳೂರು: 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಫಲಿತಾಂಶವು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವರು ಮಾತನಾಡಿ, “2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಸರ್ಕಾರಿ ಶಾಲೆಗಳ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. ಇದು ನಮ್ಮ ಸರ್ಕಾರಿ ಶಾಲೆಗಳ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ” ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆ, ಈ ಹಿಂದೆ ನಡೆಸಿದ ಪಿಯುಸಿ ಪರೀಕ್ಷೆ-2 ಕೂಡ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವ್ಯಾಸಂಗವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಮುಂದುವರಿಸಲು ನೆರವಾಗಿದೆ. ವಿದ್ಯಾರ್ಥಿಗಳಿಗೆ ಎರಡನೇ ಅವಕಾಶ ನೀಡುವುದರಿಂದ ಅವರ ಭವಿಷ್ಯಕ್ಕೆ ಯಾವುದೇ ತಡೆಯಾಗುವುದಿಲ್ಲ ಎಂಬುದು ನಮ್ಮ ಸರ್ಕಾರದ ದೃಢ ನಂಬಿಕೆ” ಎಂದು ಸಚಿವರು ಒತ್ತಿ ಹೇಳಿದರು.

“ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಗೊಳಿಸಲು ಮತ್ತು ಅವರಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ನಾವು ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿ ಉತ್ತಮ ಫಲಿತಾಂಶ ನೀಡಿದೆ. ಈ ಪದ್ಧತಿಯಿಂದಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಾಗಿದೆ” ಎಂದು ಶ್ರೀ ಮಧು ಬಂಗಾರಪ್ಪ ಅವರು ನುಡಿದರು.

2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ. 56.14) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿರುವುದು ಈ ಪದ್ಧತಿಯ ಸಕಾರಾತ್ಮಕ ಪರಿಣಾಮವನ್ನು ತೋರಿಸುತ್ತದೆ.

ಅಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಶೇ. 100ರಷ್ಟು ಫಲಿತಾಂಶ ಪಡೆದಿರುವುದು ಹೆಮ್ಮೆಯ ಸಂಗತಿ. ಈ ನಾಲ್ಕು ವಿದ್ಯಾರ್ಥಿಗಳಲ್ಲಿ ಒಬ್ಬರು ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.

2025ರ ಪರೀಕ್ಷೆ-2ರ ಅವಕಾಶದಿಂದ ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಮುಂದಿನ ವ್ಯಾಸಂಗ ಮುಂದುವರಿಸಲು ಅನುಕೂಲವಾಗಿದೆ.

ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರ ಸತತ ಪ್ರಯತ್ನದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡು ಹಾಜರಾಗಿದ್ದಾರೆ.

ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ಪರಿಹಾರ ಬೋಧನಾ ತರಗತಿಗಳನ್ನು (Remedial classes) ನಡೆಸಿದು, ಇದು ಫಲಿತಾಂಶ ಸುಧಾರಣೆಗೆ ಸಹಕಾರಿಯಾಗಿದೆ.

BREAKING: `SSLC Exam-2' results announced: Minister Madhu Bangarappa happy with the excellent performance of government school students
Share. Facebook Twitter LinkedIn WhatsApp Email

Related Posts

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM2 Mins Read
Recent News

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

07/03/2026 11:18 AM

BREAKING: ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್‌ ನಿರ್ದೋಷಿ:ಹೈಕೋರ್ಟ್‌ನಿಂದ ಮಹತ್ವದ ತೀರ್ಪು

07/03/2026 11:07 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

SHOCKING : ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ `ಆ್ಯಸಿಡ್’ ದಾಳಿ !

07/03/2026 10:50 AM
State News
KARNATAKA

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

By kannadanewsnow5707/03/2026 11:18 AM KARNATAKA 2 Mins Read

ಸೈಬರ್ ವಂಚಕರು ಜನರನ್ನು ಮೋಸ ಮಾಡಲು ಪ್ರತಿದಿನ ಹೊಸ ಹೊಸ ದಾರಿಗಳನ್ನು ಹುಡುಕುತ್ತಲೇ ಇರುತ್ತಾರೆ. ಫೋನ್ ಕರೆ ಮಾಡಿ ಅಥವಾ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

07/03/2026 10:54 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ `ಹಳೆಯ ಪಹಣಿ, ಮುಟೇಶನ್ ದಾಖಲೆಗಳು !

07/03/2026 10:41 AM

BREAKING : ಡಾಗ್ ಸತೀಶ್ ಗೆ ಜೀವ ಬೆದರಿಕೆ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ‘FIR’ ದಾಖಲು

07/03/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.