ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಾರತ್ತಹಳ್ಳಿಯ ನವ್ಯ ಶ್ರೀ ಹಾಗೂ ಸೃಜನ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಂದು ಹೊಸ ಮೊಬೈಲ್ ಜಪ್ತಿ ಮಾಡಲಾಗಿದೆ.ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.