Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BMTC ಸಿಬ್ಬಂದಿ ಮೇಲೆ ಪದೇ ಪದೇ ಹಲ್ಲೆ, ಅವಮಾನ: ಸೂಕ್ತ ಕ್ರಮಕ್ಕೆ ಗೃಹ ಸಚಿವರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ
KARNATAKA

BMTC ಸಿಬ್ಬಂದಿ ಮೇಲೆ ಪದೇ ಪದೇ ಹಲ್ಲೆ, ಅವಮಾನ: ಸೂಕ್ತ ಕ್ರಮಕ್ಕೆ ಗೃಹ ಸಚಿವರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ

By kannadanewsnow0915/06/2025 11:43 AM

ಬೆಂಗಳೂರು: ನಗರದಲ್ಲಿ BMTC ಸಿಬ್ಬಂದಿ ಮೇಲೆ ಪದೇಪದೆ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ನಾನು ಪೊಲೀಸ್ ಆಯುಕ್ತರು ಬೆಂಗಳೂರುರವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ ರವರಿಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಕೂಡ ಸೂಚಿಸಿರುತ್ತೇನೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದಿದ್ದಾರೆ.

ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

BMTC, KSRTC ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆ ನಮ್ಮ ಬದ್ಧತೆಯಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸಲಾಗದು. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿದ ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕೂಡ ಮುಲಾಜಿಲ್ಲದೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಪ್ತಕರಣಗಳು ಮರುಕಳಿಸದಂತೆ ತಡೆಯಲು ಶಾಶ್ವತ ಪರಿಹಾರವನ್ನು ರೂಪಿಸಲು‌ ಕೋರಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ..,

ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮರಳಿ ಮಾಲೀಕನಿಗೆ ತಲುಪಿಸಿದ ಮೈಸೂರಿನ ರೈಲ್ವೆ ರಕ್ಷಣಾ ಪಡೆ

Share. Facebook Twitter LinkedIn WhatsApp Email

Related Posts

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM1 Min Read

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM1 Min Read

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM2 Mins Read
Recent News

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM
State News
KARNATAKA

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

By kannadanewsnow0928/04/2026 9:30 PM KARNATAKA 1 Min Read

ಬೆಂಗಳೂರು: ಮಳೆಗಾಲದ ಆರಂಭ ಅಥವಾ ಅನಿರೀಕ್ಷಿತ ಹವಾಮಾನ ಬದಲಾವಣೆಯ ಸಮಯದಲ್ಲಿ ಸಿಡಿಲು ಬಡಿಯುವುದು ಪ್ರಕೃತಿಯ ಅನಿವಾರ್ಯ ವಿದ್ಯಮಾನ. ಆದರೆ, ಸರಿಯಾದ…

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

28/04/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.