ದಕ್ಷಿಣಕನ್ನಡ : ಎನ್ ಆರ್ ಐ ವಿದ್ಯಾರ್ಥಿಗಳಿದ್ದ ದೇರಳಕಟ್ಟೆಯ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದುಬಂದಿದೆ.
ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿಯುತ್ತಿರುವ ಎನ್ ಆರ್ ಐ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸಿದೆ.