ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ. ಅದರಲ್ಲೂ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.