ದಕ್ಷಿಣಕನ್ನಡ : ರಾಜ್ಯದಲ್ಲಿ ಅವಧಿಗೂ ಮುನ್ನ ಮುಂಗಾರು ಮಳೆ ಆರಂಭವಾಗಿದ್ದು ಅಲ್ಲದೆ, ಕಳೆದ ಹಲವಾರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಭಾರಿ ಮಳೆಯಿಂದಾಗಿ ಈಗಾಗಲೇ ಹಲವರು ಬಲಿಯಾಗಿದ್ದು, ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು ಮನೆಯ ಬಳಿ ಆಟವಾಡುತ್ತಲೇ ನಾಲೆಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ದುರಂತ ಸಂಭವಿಸಿದೆ.
ಹೌದು ಮನೆಯ ಬಳಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಜಾಲಿ ಪಟ್ಟಡಲ್ಲಿ ಈ ದುರಂತ ಸಂಭವಿಸಿದೆ. 2 ವರ್ಷದ ಕಂದಮ್ಮ ನಾಲೆಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾಳೆ.
ತೌಸಿಫ್ ಹಾಗೂ ಅರ್ಜು ದಂಪತಿಯ ಎರಡು ವರ್ಷದ ಮಗಳು ಆಟವಾಡುತ್ತಾ ಒಬ್ಬಳೇ ಮನೆಯಿಂದ ಹೊರಬಂದಿದ್ದಾಳೆ. ಹೀಗೆ ಬಂದವರು ಮನೆಯ ಬಳಿ ನಾಲೆ ಬಳಿ ಹೋಗಿದ್ದರೂ ಪೋಷಕರು ಗಮನಿಸಿಲ್ಲ. ಆಕಸ್ಮಿಕವಾಗಿ ಮಗು ನಾಲೆಗೆ ಬಿದ್ದಿದ್ದಾಳೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಮಗುವನ್ನು ರಕ್ಷಿಸಲು ಯತ್ನಿಸಿ ಮೇಲಕೆತ್ತಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಬದುಕುಳಿಯಲಿಲ್ಲ.