ನವದೆಹಲಿ : ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು ಇದುವರೆಗೂ ಹಲವಾರು ಜನ ಸಾವನಪ್ಪಿದ್ದಾರೆ. ಈ ಒಂದು ಯುದ್ಧದ ಪರಿಣಾಮದಿಂದಾಗಿ ದ್ರವರೂಪದ ಚಿನ್ನ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದ್ದು, ಕಚ್ಚಾ ತೈಲದ ಬೆಲೆ ಶೇಕಡ 15ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ಇಸ್ರೇಲ್ ಹಾಗೂ ಇರಾನ್ ಯುದ್ಧದ ಪರಿಣಾಮದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಆತಂಕ ಶುರುವಾಗಿದ್ದು, ಭಾರತಕ್ಕೆ ಪ್ರತಿದಿನ 39 ಲಕ್ಷ ಬ್ಯಾರೆಲ್ ಕಚ್ಚಾ ತೈಲದ ಅಗತ್ಯವಿದೆ. ಶೇ. 80ರಷ್ಟು ಕಚ್ಚಾತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ.ಯುದ್ಧದ ಪರಿಣಾಮದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹೆಚ್ಚುವ ಸಾಧ್ಯತೆ ಇದೆ. ಸದ್ಯಕ್ಕೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ನಿಲ್ಲುವಂತೆ ಕಾಣುತ್ತಿಲ್ಲ.
ಇಸ್ರೇಲ್ ಮೇಲೆ ಇರಾನ್ ಸುಮಾರು 200ಕ್ಕೂ ಹೆಚ್ಚು ಕ್ಷೀಣಿ ಉಡಾಯಿಸಿದೆ. ಇದರಿಂದ ಕೆರಳಿರುವ ಇಸ್ರೇಲ್ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಇದರಿಂದ ಅಂತರಾಷ್ಟ್ರೀಯ ಕಚ್ಚಾತೈಲ ಬೆಲೆಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಕಚ್ಚಾ ಟೈಲ ಬೆಲೆ ಏರಿಕೆ ಎಫೆಕ್ಟ್ ತಟ್ಟುವ ಸಾಧ್ಯತೆ ಇದೆ. ಭಾರತ ಒಳಗೊಂಡಂತೆ ಜಾಗತಿಕವಾಗಿ ತೈಲ ಬೆಲೆ ಏರಿಕೆ ಆತಂಕ ಶುರುವಾಗಿದೆ.