Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!
KARNATAKA

GOOD NEWS: `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!

By kannadanewsnow57
vidhana soudha
vidhana soudha

ಬಳ್ಳಾರಿ: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.

ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದಲ್ಲಿ ಎರಡನೇ ಹಂತದ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ಇದರಲ್ಲಿ ಅನುತ್ತೀರ್ಣರಾದ ಮತ್ತು ಶೇಕಡವಾರು ಫಲಿತಾಂಶ ಹೆಚ್ಚಿಸಿಕೊಳ್ಳಲು ನೋಂದಾಯಿಸಿಕೊAಡ ಮಕ್ಕಳಲ್ಲಿ ಒಟ್ಟಾರೆ 84 ಸಾವಿರ ಮಕ್ಕಳು (ಶೇ.98.25 ರಷ್ಟು) ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ವಿವರಿಸಿದರು.

ರಾಜ್ಯದ ಶಾಲೆಗಳಲ್ಲಿ ಮುಖಚಹರೆ ಆಧಾರಿತ ಹಾಜರಾತಿ ಕಡ್ಡಾಯವಾಗಿ ಮಾಡಲಾಗುತ್ತಿದ್ದು, ಈಗಾಗಲೇ ಈ ಕುರಿತು ಪ್ರಾಯೋಗಿಕ ಹಂತ ನಡೆಸಲಾಗಿದೆ ಎಂದರಲ್ಲದೇ, ಅಜೀಂ ಪ್ರೇಮ್ ಜೀ, ಇನ್ಫೋಸಿಸ್ ಹಾಗೂ ವಿವಿಧ ಸಂಸ್ಥೆಗಳ ಸಿಎಸ್ಆರ್ ಅನುದಾನ ಬಳಸಿಕೊಂಡು ಮಕ್ಕಳ ಆರೋಗ್ಯದ ಪೌಷ್ಟಿಕತೆ, ಗುಣಮಟ್ಟ ಶಿಕ್ಷಣಕ್ಕೆ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಹ ಶಾಲೆಗೆ ಕೊಡುಗೆ ನೀಡಬೇಕು ಎಂದರು.

ದೇಶದ ಭವಿಷ್ಯವು ಮಕ್ಕಳ ಶಿಕ್ಷಣದ ಬುನಾದಿಯಲ್ಲಿದೆ. ಹಾಗಾಗಿ ನಮ್ಮ ಸರ್ಕಾರವು ಶಾಲೆಗಳಿಗೆ ಮೂಲಭೂತ ಸೌಕರ್ಯ, ಗುಣಮಟ್ಟ ಶಿಕ್ಷಣದ ಬೋಧನೆಗೆ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಇದಕ್ಕೆ ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.

GOOD NEWS: Good news for `teacher' post aspirants: Notification for the recruitment of 13000 teachers in the state!
Share. Facebook Twitter LinkedIn WhatsApp Email

Related Posts

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

1 Min Read

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

2 Mins Read

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read
Recent News

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

State News
KARNATAKA

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಯುವ ನ್ಯಾಯವಾದಿ ಶ್ರಾವ್ಯ ಸಾಗರ್ ಅವರು ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ಪ್ರತಿಷ್ಠಿತ ಜೀವವೈವಿಧ್ಯ ಪ್ರಶಸ್ತಿ ಲಭಿಸಿದೆ.…

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.