ಕಲಬುರಗಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ.
ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.