ಬೆಂಗಳೂರು : ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣದ ಆರೋಪದ ಹಿನ್ನೆಲೆ ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿರುವ ವಿಚಾರವಾಗಿ ಇಡಿ ಅಧಿಕಾರಿಗಳಿಂದ ನನಗೆ ಸಮನ್ಸ್ ಬಂದಿರುವುದು ನಿಜ ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಸ್ಪಷ್ಟನೆ ನೀಡಿದರು.
ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು, ಐಶ್ವರ್ಯ ಗೌಡ ಜೊತೆಗೆ ಯಾವುದೇ ಹಣದ ವ್ಯವಹಾರ ಮಾಡಿಲ್ಲ. ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದರು. ಆದರೆ ಜೂನ್ 23 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದೇನೆ. ಎರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರಿಂದ ನಾನು ಭಾಗಿಯಾಗಿದ್ದೆ. ಪ್ರಕರಣದ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ ಗೆ ಪತ್ರ ಬರೆದು ಮನವಿ ಮಾಡಿದ್ದೆ. ಇಡಿ ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.