ಚಿಕ್ಕೋಡಿ : ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ (70) ಇಂದು ಅನಾರೋಗ್ಯದಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ನಿಧನರಾಗಿದ್ದಾರೆ.ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನ ಕಾಕಾ ಸಾಹೇಬ್ ಪಾಟೀಲ್ ಅಗಲಿದ್ದಾರೆ.
ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು.