ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡುವ ಸಾಧ್ಯತೆ ಇದೆ.
ನಾಳೆ ಜೂನ್ 19ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಮುಂದೂಡಲು ತೀರ್ಮಾನಿಸಲಾಗಿದೆ. ನಾಳೆ ವಿಧಾನಸೌಧದಲ್ಲಿಯೇ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ.
ನಾಳೆ ಐತಿಹಾಸಿಕ ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಲಾಗಿದೆ.