ಬೆಂಗಳೂರು : ಬೆಂಗಳೂರಿನಲ್ಲಿ 10 ಲಕ್ಷ ರೂ. ಲಂಚ ಪಡೆಯುವ ವೇಳೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
10 ಲಕ್ಷ ರೂ. ಲಂಚ ಪಡೆಯುವಾಗಲೇ ಬಿಬಿಎಂಪಿ ಕಾರ್ಯಾಪಾಲಕ ಅಭಿಯಾಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿ.ವಿ.ರಾಮನ್ ನಗರ ವಿಭಾಗದ ವಿ.ಯರಪ್ಪ ರೆಡ್ಡಿ ಓರ್ವ ಗುತ್ತಿಗೆದಾರರ ಕಡತ ಫಾರ್ವರ್ಡ್ ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಕಡತ ಫಾರ್ವರ್ಡ್ ಗೆ ಯರಪ್ಪ ರೆಡ್ಡಿ 10 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಣದ ಸಹಿತ ಯರಪ್ಪ ರೆಡ್ಡಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.