ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ರದ್ದು ಮಾಡಲಾಗಿದ್ದು, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದೆ.
ನಾಳೆ ಜೂನ್ 19ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಮುಂದೂಡಲು ತೀರ್ಮಾನಿಸಲಾಗಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿಯೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.