ಬೆಂಗಳೂರು: ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯುವನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದಿದೆ.
ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಹೇಳಿದೆ.
ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ. ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025 ರಲ್ಲಿ ಪದವಿ/ಸ್ನಾತಕೊತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿ ಕೊಳ್ಳಬಹುದಾಗಿರುತ್ತದೆ.
ಅರ್ಹತೆ:
1. 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು,
2. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
3. ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು. 4. ಕನಿಷ್ಟ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.
ಯುವನಿಧಿ ಪ್ಲಸ್ – ಕೌಶಲ್ಯ ತರಬೇತಿ ಕಾರ್ಯಕ್ರಮ
ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.
ಈ ಕೆಳಕಂಡ ತರಬೇತಿ ಸಂಸ್ಥೆಗಳ ಮುಖಾಂತರ CMKKY ಯೋಜನೆ ಯಡಿಯಲ್ಲಿ ಉಚಿತ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.
1) ಚಿಟಿಟಿಸಿ (GTTC) 2) ಕೆಜಿಟಿಟಿಐ (KGTTI)
3) ಸಿಡಾಕ್ (CEDOK)
• ನೋಂದಣಿಗಾಗಿ ಸೇವಾಸಿಂಧು ಪೋರ್ಟಲ್ www.sevasindhugs.karnataka.gov.in
4) BMVNTFSA (negrboto)
5) ಸರ್ಕಾರಿ ಕೈಗಾರಿಕಾ ತರಬೇತಿ or (GOVT.ITI’s)
• ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು
• ಪ್ರತಿ ತ್ರೈಮಾಸಿಕ 1 ರಿಂದ 25 ರೊಳಗೆ ಸ್ವಯಂ ಘೋಷಣೆ ನೀಡುವುದು ಕಡ್ಡಾಯ.
• ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್ನಲ್ಲಿ ಇಂದೀಕರಿಸಿರುವುದನ್ನು
ಖಚಿತಪಡಿಸಿಕೊಳ್ಳುವುದು. https://nad.karnataka.gov.in
www.sevasindhugs.karnataka.gov.in ಸಹಾಯವಾಣಿ ಸಂಖ್ಯೆ: 1800 599 7154
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು
BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?