ಮೈಸೂರು : 3 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಚೆಸ್ಕಾಂ ಎಇಇ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ. ಚೆಸ್ಕಾಂ ವಿಜಿಲೆನ್ಸ್ ಅಧಿಕಾರಿಯಾಗಿದ್ದ ದೀಪಕ್ ಇಂದು 3 ಲಕ್ಷ್ಮ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನಧಿಕೃತ ಸಂಪರ್ಕದ ಪೆನಾಲ್ಟಿ ಹಣ ಕಡಿಮೆ ಮಾಡಲು ದೀಪಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಖಾಸಗಿ ಹೋಟೆಲ್ ನಲ್ಲಿ 3 ಲಕ್ಷ ಲಂಚ ಸ್ವೀಕರಿಸುವಾಗ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸದ್ಯ ದೀಪಕ್ನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.