ಮೈಸೂರು : ಮೈಸೂರಲ್ಲಿ ಘೋರವಾದ ಘಟನೆ ನಡೆದಿದ್ದು, ಹಾಸ್ಟೆಲ್ ನಲ್ಲಿ ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಟೆರೇಶಿಯನ್ ಕಾಲೇಜು ಹಾಸ್ಟೆಲ್ ನಲ್ಲಿ ಜೆ ಶಖಿನಾ (20) ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಇಂದು 6 ನೇ ಸೆಮಿಸ್ಟರ್ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿತ್ತು. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ