ಪುಣೆ : ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಿಕಪ್ ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜೆಜುರಿ ಮೋರ್ಗಾಂವ್ ರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಜೆಜುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀರಾಮ್ ಧಾಬಾ ಮುಂಭಾಗದಲ್ಲಿರುವ ಜೆಜುರಿ-ಮೋರ್ಗಾಂವ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಶ್ರೀರಾಮ್ ಧಾಬಾ ಮಾಲೀಕ ವೈಸ್ ತಮ್ಮ ಧಾಬಾದ ರೆಫ್ರಿಜರೇಟರ್ ಅನ್ನು ಪಿಕಪ್ ವಾಹನದಿಂದ ಇಳಿಸುತ್ತಿದ್ದಾಗ, ಹಿಂದಿನಿಂದ ಅತಿ ವೇಗದಲ್ಲಿ ಬಂದ ಸ್ವಿಫ್ಟ್ ಡಿಜೈರ್ ಕಾರು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಏಳು ಪುರುಷರು ಮತ್ತು ಒಬ್ಬ ಮಹಿಳೆ ಸಾವನ್ನಪ್ಪಿದರೆ, ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಇಬ್ಬರು ಚಿಕ್ಕ ಮಕ್ಕಳು ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜೆಜುರಿ ಗ್ರಾಮೀಣ ಆಸ್ಪತ್ರೆಗೆ ತರಲಾಗಿದೆ. ಗಾಯಾಳುಗಳಲ್ಲಿ ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಇಬ್ಬರು ಚಿಕ್ಕ ಮಕ್ಕಳು ಜೆಜುರಿಯ ಶಾಂತೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.