ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ದಾಳಿ ಮಾಡಿ ಲಂಚಬಾಕ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳೇ ಇಂತಹ ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಶ್ರೀನಾಥ್ ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ.
ಹೌದು ಲೋಕಾಯುಕ್ತ ಪೊಲೀಸರ ದಾಳಿ ಬೆದರಿಕಯೋಡ್ಡಿ ಅಧಿಕಾರಿಗಳಿಂದ ಹಣ ಹೊಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಜೂನ್ 30ಕ್ಕೆ ನಿಗದಿಪಡಿಸಿದೆ. ಶ್ರೀನಾಥ್ ಜೋಶಿ ಲೋಕಾಯುಕ್ತ ಪೊಲೀಸರ ನೋಟಿಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.