ಬೆಂಗಳೂರು : ಇಸ್ರೇಲ್ ಹಾಗೂ ಇರಾನ್ ನಡುವೆ ತೀವ್ರ ಯುದ್ಧ ನಡೆಯುತ್ತಿದೆ. ಎರಡು ದೇಶಗಳ ನಡುವೆ ಮಿಸೈಲ್ ಡ್ರೋನ್ ವಾರ್ ನಡೆಯುತ್ತಿದ್ದು, ಜನಸಾಮಾನ್ಯರು ದಾಳಿಗೆ ತುತ್ತಾಗಿದ್ದಾರೆ. ಇಂತಹ ಆತಂಕದ ಪರಿಸ್ಥಿತಿಯ ನಡುವೆ ಇಸ್ರೇಲ್ನ ಟೆಲ್ ಅವೀವ್ನಲ್ಲಿ 18 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದರು. ಇಂದು 18 ದಿನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಹೌದು ಇಸ್ರೇಲ್ ಅಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಸಂಜೆ 5 ಗಂಟೆಗೆ ಏರ್ ಇಂಡಿಯಾ ವಿಮಾನದಲ್ಲಿ 18 ಜನ ಕನ್ನಡಿಗರು ಇದೀಗ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 18 ಜನ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.