ಬೆಂಗಳೂರು : ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವಡೆ ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಓವರ್ ಟೈಂ, ಯುವತಿಯರು ಅಶ್ಲೀಲ ಬಟ್ಟೆ ತೊಟ್ಟು ಡ್ಯಾನ್ಸ್ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ದಾಳಿ ನಡೆಸಿದ್ದಾರೆ.
ಕೇಂದ್ರ ವಿಬಾಗ ಹಾಗೂ ಪಶ್ವಿಮ ವಿಭಾಗದ ಡ್ಯಾನ್ಸ್ ಬಾರ್ ಗಳ ಮೇಲೂ ದಾಳಿ ನಡೆಸಲಾಗಿದ್ದು, ಕಬ್ಬನ್ ಪಾರ್ಕ್ ಅಶೋಕ್ ನಗರ, ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್ ಗಳ ಮೇಲೆ ಪ್ರಕರಣ ದಾಖಲಾಗಿದೆ.