ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಪರೀಷ್ಕರಣೆ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಮಾಡುವುದಿಲ್ಲ. ಪ್ರತಿ ತಿಂಗಳು 10 ರಿಂದ 15 ಸಾವಿರ ಹೊಸಬರು ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಇಲ್ಲ. ಈಗಾಗಲೇ ಏಪ್ರಿಲ್ ಕಂತು ಸಂದಾಯವಾಗಿದೆ. ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ಇಲಾಖೆ ಬದಲಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯ ಆಗಬೇಕು ಎಂದು ಕೇಂದ್ರದ ನಿಯಮವಿದೆ. ಇದರಿಂದ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.