ಬೆಂಗಳೂರು :ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಕೇಂದ್ರ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು, ಬಿಜಿಎಸ್ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. ಹೆಚ್ಎಎಲ್ ಏರ್‌ಪೋರ್ಟ್‌ಗೆ ಆಗಮಿಸಿದ ಅಮಿತ್ ಶಾ ಸ್ವಾಗತಕ್ಕೆ ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.
ಇನ್ನು ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ್ದೇನೆ ಅಂತ ಅಮಿತ್ ಶಾ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ನಾಳೆ ನಡೆಯಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ್ದೇನೆ.
Reached Bengaluru (Karnataka). Tomorrow will attend the inauguration ceremony of the Bengaluru Campus of the Adichunchanagiri University. pic.twitter.com/DUVBUufolW
— Amit Shah (@AmitShah) June 19, 2025