ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಎಫ್ ಐಆರ್ ರದ್ದು ಕೋರಿ ಬಿಜೆಪಿ ಎಂಎಲ್ ಸಿ ಎನ್. ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡಸಲಾಗಿದೆ.
ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೆ ಎಂಬ ಹೇಳಿಕೆ ಸಂಬಂಧ ಎನ್. ರವಿಕುಮಾರ್ ಕ್ಷಮೆ ಕೇಳಿದ್ದಾರೆ ಎಂದು ಹೈಕೋರ್ಟ್ ಗೆ ಹೆಚ್ಚುವರಿ ಎಸ್ ಪಿಪಿ ಬಿ.ಎನ್ ಜಗದೀಶ್ ಹೇಳಿದ್ದಾರೆ.
ಸದ್ಯ ವಿಚಾರಣೆ ನಡೆಸಿದ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಣೆ ಮಾಡಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ FIR ದಾಖಲಾಗಿತ್ತು.