ಬೆಂಗಳೂರು : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ ನಗರದಲ್ಲಿ ಆಟವಾಡುತ್ತಾ ಬಾಲಕನೊಬ್ಬ ಪೋರಕೆಯನ್ನು ಹೈಟೆನ್ಶನ್ ವಿದ್ಯುತ್ ಬಳಿ ಎಸೆದಾಗ ಈ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕ ಗಂಭೀರವಾಗಿ ಗಾಯಗೊಳ್ಳುತ್ತಾನೆ. ನಂತರ ಆತನನ್ನು ಸ್ಥಳಿಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.
ಹೌದು ಹೈಟೆನ್ಷನ್ ವಿದ್ಯುತ್ ತಗುಲಿ ಗಾಯಗೊಂಡಿದ್ದ ಬಾಲಕ ಇದೀಗ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ವರ್ಷದ ಅನಂತ್ ಕೊನೆಯುಸಿರೆಳಿದಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ನ ಸ್ವಾತಂತ್ರ್ಯ ನಗರದಲ್ಲಿ ಘಟನೆ ನಡೆದಿದ್ದು, ನೇಪಾಳದಿಂದ ಬಂದು ಅನಂತ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಜೂನ್ 15ರಂದು ಪೊರಕೆ ಎಸೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಅನಂತ್ ಗಾಯಗೊಳ್ಳುತ್ತಾನೆ. ವಿಕ್ಟೊರಿಯ ಆಸ್ಪತ್ರೆಯಲ್ಲಿ ಅನಂತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 12:30 ಸುಮಾರಿಗೆ ಸಾವನ್ನಪ್ಪಿದ್ದಾನೆ ಘಟನೆ ಸಂಭಂದ ಕೆಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನಂತನ ಕುಟುಂಬ ಮೂಲತಃ ನೇಪಾಳದವರು ಕಳೆದ ಎರಡು ವರ್ಷಗಳ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಮೃತ ಅನಂತನ ತಾಯಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ಮೂರ್ನಾಲ್ಕು ಮನೆಗಳನ್ನು ಕೆಲಸ ಮಾಡುತ್ತಾ ಮಕ್ಕಳನ್ನು ಸಾಕಿದ್ದರು. ಇದೀಗ ಬಾಲಕ ಅನಂತನನ್ನು ಕಳೆದುಕೊಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.