Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿಯ ಹುಚ್ಚಾಟ.!

17/08/2025 11:44 AM

ನಕಲಿ ಪ್ರಮಾಣಪತ್ರಗಳು ಮತ್ತು ತಿದ್ದುಪಡಿಗಳನ್ನು ನೀಡುವ ನಕಲಿ ಪ್ಲಾಟ್ಫಾರ್ಮ್ಗಳ ವಿರುದ್ಧ CBSE ಎಚ್ಚರಿಕೆ

17/08/2025 11:41 AM

ಭಾರತೀಯ ರೈಲ್ವೆ ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಪ್ರಯಾಣವಿದೆಯೇ? ಇಲ್ಲಿದೆ ಸಂಪೂರ್ಣ ವಿವರ

17/08/2025 11:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day
KARNATAKA

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

By kannadanewsnow5721/06/2025 5:10 AM

ಅಂತಾರಾಷ್ಟ್ರೀಯ ಯೋಗ ದಿನ ಭಾರತಕ್ಕೆ ಬಹಳ ವಿಶೇಷವಾಗಿದೆ. ಏಕೆಂದರೆ ಯೋಗವು ಶತಮಾನಗಳಿಂದ ನಮ್ಮ ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದೆ. ಇಡೀ ಜಗತ್ತು ಜೂನ್ 21ರ ಇಂದು 11 ನೇ ಯೋಗ ದಿನವನ್ನು ಆಚರಿಸಲಿದೆ.

ಪ್ರತಿ ವರ್ಷ ಯೋಗ ದಿನವನ್ನು ನಿಗದಿತ ವಿಷಯದೊಂದಿಗೆ ಆಚರಿಸಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ, ಭಾರತವನ್ನು ಯೋಗ ಗುರುವನ್ನಾಗಿ ಮಾಡಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ. 2014ರ ಸೆಪ್ಟಂಬರ್ 14ರಂದು ನಡೆದ ಸಭೆಯಲ್ಲಿ ಯೋಗ ದಿನವನ್ನು ಆಚರಿಸಿದ್ದನ್ನು ಅವರು ಉಲ್ಲೇಖಿಸಿದರು. ಡಿಸೆಂಬರ್ 11, 2014 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪ್ರಧಾನಿ ಮೋದಿಯವರ ಈ ಪ್ರಸ್ತಾಪವನ್ನು ಅನುಮೋದಿಸಿತು. ಇದರೊಂದಿಗೆ, ಅವರು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಆಯ್ಕೆ ಮಾಡಿದರು. ನಿರ್ಣಯವನ್ನು 177 ದೇಶಗಳು ಬೆಂಬಲಿಸಿದವು.

ಯೋಗಾಭ್ಯಾಸಕ್ಕೆ ಸಾಮಾನ್ಯ ಮಾರ್ಗದರ್ಶನಗಳು, ಯೋಗವನ್ನು ಅಭ್ಯಾಸ ಮಾಡುವಾಗ ಈ ಕೆಳಗೆ ನೀಡಲಾಗಿರುವ ಮಾರ್ಗದರ್ಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಅಭ್ಯಾಸದ ಮೊದಲು

ಶುಚಿತ್ವವು ಯೋಗವನ್ನು ಅಭ್ಯಾಸ ಮಾಡಲು ಬೇಕಾದ ಪ್ರಮುಖ ಅಗತ್ಯತೆ. ಇದು ಸುತ್ತಮುತ್ತಲಿನ ಪರಿಸರ, ದೇಹ ಮತ್ತು ಮನಸ್ಸಿನ ಶುದ್ಧಿಯನ್ನು ಒಳಗೊಂಡಿರುತ್ತದೆ.
ಯೋಗಾಭ್ಯಾಸವನ್ನು ಮಾಡುವಾಗ ಖಾಲಿ ಹೊಟ್ಟೆಯಲ್ಲಿ ಇರುವುದು ಉತ್ತಮ. ಲಘುವಾದ ಆಹಾರವನ್ನು ಸೇವಿಸಬಹುದು. ಸುಸ್ತು ಅನಿಸಿದಲ್ಲಿ ಬೆಚ್ಚಗಿನ ನೀರಿನಲ್ಲಿ ಸ್ವಲ್ಪ

ಜೇನುತುಪ್ಪನವನ್ನು ಸೇರಿಸಿ ಸೇವಿಸಬಹುದು.

ಮಲ ಮೂತ್ರಗಳ ವಿಸರ್ಜನೆ ಮುಗಿಸಿದ ನಂತರ ಯೋಗಾಭ್ಯಾಸವನ್ನು ಮಾಡಬೇಕು.

ಅಭ್ಯಾಸಕ್ಕಾಗಿ ಯೋಗ ಮ್ಯಾಟ್ ಅಥವಾ ಬೆಡ್ಶೀಟ್ ಬಳಸಬಹುದು.

ಹಗುರವಾದ ಮತ್ತು ಆರಾಮದಾಯಕವಾದ ಹತ್ತಿಯ ಉಡುಪುಗಳನ್ನು ಧರಿಸುವುದರಿಂದ ಯೋಗವನ್ನು ಅಭ್ಯಾಸ ಮಾಡಲು ಸುಲಭವಾಗುತ್ತದೆ.
ಅವಸರವಾಗಿ ಯೋಗವನ್ನು ಅಭ್ಯಾಸ ಮಾಡಬಾರದು.

ದೀರ್ಘಕಾಲದ ಕಾಯಿಲೆ /ನೋವು/ಹೃದಯದ ಸಮಸ್ಯೆಗಳು/ಆಯಾಸ ಮತ್ತು ತೀವ್ರವಾದ ಒತ್ತಡ ಇದ್ದಲ್ಲಿ ಅಭ್ಯಾಸವನ್ನು ಮಾಡುವ ಮೊದಲು ವೈದ್ಯರ ಮತ್ತು ಯೋಗ ಶಿಕ್ಷಕರ ಸಲಹೆಯನ್ನು ಪಡೆಯಬೇಕು.

ಗರ್ಭಿಣಿಯರು, ಬಾಣಂತಿಯರು ಮತ್ತು ಮುಟ್ಟಿನ ಸಮಯದಲ್ಲಿ ಯೋಗವನ್ನು ಅಭ್ಯಾಸ ಮಾಡುವ ಮೊದಲು ತಜ್ಞರ ಸಲಹೆಯನ್ನು ಪಡೆಯಬೇಕು.
ಅಭ್ಯಾಸದ ಸಮಯದಲ್ಲಿ

ಯೋಗದ ಅಭ್ಯಾಸವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಬೇಕು. ಇದು ಮನಸ್ಸನ್ನು ಶಾಂತವಾಗಿ ಇಡಲು ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸುತ್ತದೆ.
ಯೋಗಾಭ್ಯಾಸಗಳನ್ನು ನಿಧಾನವಾಗಿ, ಶಾಂತವಾದ ಸ್ಥಿತಿಯಲ್ಲಿ, ದೇಹದ ಚಲನೆ ಮತ್ತು ಉಸಿರಾಟದ ಗತಿಯನ್ನು ಗಮನಿಸುತ್ತಾ ಮಾಡಬೇಕು.

ಅಭ್ಯಾಸದ ಸಮಯದಲ್ಲಿ, ನಿರ್ದಿಷ್ಟವಾಗಿ ಹೇಳಿರುವ ಸಂದರ್ಭಗಳನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಉರಿಸನ್ನು ಹಿಡಿದಿರಬಾರದು.
◆ ನಿರ್ದಿಷ್ಟವಾಗಿ ಹೇಳಿರುವ ಸಂದರ್ಭಗಳನ್ನು ಹೊರತುಪಡಿಸಿ ಸಾಮಾನ್ಯವಾಗಿ ಉಸಿರಾಟವು ಯಾವಾಗಲೂ ಮೂಗಿನ ಹೊಳ್ಳೆಗಳ ಮೂಲಕ 2. Harmony & Peace ದೇಹವನ್ನು ಬಿಗಿಯಾಗಿ ಹಿಡಿದುಕೊಳ್ಳಬಾರದು ಮತ್ತು ಅನಗತ್ಯ ಎಳೆತಗಳನ್ನು ನೀಡಬಾರದು.

ದೇಹದ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಗವನ್ನು ಅಭ್ಯಾಸ ಮಾಡಬೇಕು. ಕೆಲವೊಮ್ಮೆ ಧನಾತ್ಮಕ ಪರಿಣಾಮಗಳನ್ನು ಪಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ನಿರಂತರ ಮತ್ತು ನಿಯಮಿತ ಅಭ್ಯಾಸ ಬಹಳ ಅವಶ್ಯಕ.

ಪ್ರತಿಯೊಂದು ಆಸನವೂ ನಿರ್ದಿಷ್ಟ ಸಲಹೆ ಹಾಗೂ ಮಿತಿಗಳನ್ನು ಹೊಂದಿದ್ದು ಅಭ್ಯಾಸದ ಸಮಯದಲ್ಲಿ ಇವುಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು.
ಯೋಗಾಭ್ಯಾಸವನ್ನು ಶಾಂತಿಮಂತ್ರ/ಸಂಕಲ್ಪ ಅಥವಾ ಧ್ಯಾನದೊಂದಿಗೆ ಕೊನೆಗೊಳಿಸಬೇಕು.

ಅಭ್ಯಾಸದ ನಂತರ

ಯೋಗಾಭ್ಯಾಸದ ನಂತರ ನಿಧಾನವಾಗಿ ಚೇತರಿಸಿಕೊಂಡು ದೈನಂದಿನ ಕೆಲಸಗಳನ್ನು ಮಾಡಬೇಕು.

ಯೋಗಾಭ್ಯಾಸದ 20 ರಿಂದ 30 ನಿಮಿಷಗಳ ನಂತರ ಸ್ನಾನವನ್ನು ಮಾಡಬಹುದು.

ಯೋಗಾಭ್ಯಾಸದ 20 ರಿಂದ 30 ನಿಮಿಷಗಳ ನಂತರವೇ ಆಹಾರವನ್ನು ಸೇವಿಸಬಹುದು.

ಆಹಾರದ ನಿಯಮಗಳು

ಕೆಲವೊಂದು ಆಹಾರ ಸೇವನೆಯ ಅಭ್ಯಾಸಗಳು ದೇಹ ಮತ್ತು ಮನಸ್ಸನ್ನು ಯೋಗಾಭ್ಯಾಸಕ್ಕೆ ಉತ್ತಮವಾಗಿ ಹೊಂದಿಕೊಳ್ಳಲು ಸಹಕಾರಿಯಾಗಿವೆ. ಸಾಮಾನ್ಯವಾಗಿ ಸಸ್ಯಾಹಾರವು ಸೂಕ್ತವಾಗಿದೆ. ಅನಾರೋಗ್ಯ ಪೀಡಿತರಲ್ಲಿ ಅಥವಾ ಹೆಚ್ಚಿನ ದೈಹಿಕ ಚಟುವಟಿಕೆ ಮಾಡುವವರನ್ನು ಹೊರತುಪಡಿಸಿ 30 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ದಿನಕ್ಕೆ ಎರಡೇ ಹೊತ್ತು ಆಹಾರ ಸೇವನೆಯು ಪ್ರಶಸ್ತವಾಗಿದೆ.
ಯೋಗಾಭ್ಯಾಸದ ಪ್ರಯೋಜನಗಳು:

ಯೋಗವು ಎಲ್ಲಾ ಬಂಧನಗಳಿಂದ ಮುಕ್ತವಾಗಲು ಒಂದು ಮಾರ್ಗವಾಗಿದೆ. ಪ್ರಾಚೀನ ಕಾಲದಿಂದಲೂ ಹಲವಾರು ಯೋಗ ಸಾಧಕರ ಅನುಭವಗಳ ಆಧಾರದ ಮೇಲೆ ಹಾಗೂ ಇತ್ತೀಚಿನ ದಿನಗಳಲ್ಲಿ ಯೋಗದ ಹಲವಾರು ದೈಹಿಕ ಮತ್ತು ಮಾನಸಿಕ ಪ್ರಯೋಜನಗಳನ್ನು ವೈಜ್ಞಾನಿಕವಾಗಿ ದೃಢಪಡಿಸಲಾಗಿದ್ದು ಅವುಗಳು ಈ ಕೆಳಗಿನಂತಿವೆ.

ಯೋಗವು ದೈಹಿಕ ಸಾಮರ್ಥ್ಯ, ಮಾಂಸಖಂಡ ಮತ್ತು ಮೂಳೆಗಳ ದೃಢತೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ.

ಮಾನಸಿಕ ಖಿನ್ನತೆ, ಆಯಾಸ, ಆತಂಕ ಮುಂತಾದ ಸಮಸ್ಯೆಗಳ ನಿವಾರಣೆಗೆ ಯೋಗವು ಸಹಕಾರಿಯಾಗಿದೆ.
ಮಧುಮೇಹ, ಉಸಿರಾಟದ ತೊಂದರೆ, ಅಲರ್ಜಿ, ಅಧಿಕ ರಕ್ತದೊತ್ತಡ, ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ನಿರ್ವಹಣೆಯಲ್ಲಿ ಇದು ಪ್ರಯೋಜನಕಾರಿಯಾಗಿದೆ.

ಮುಟ್ಟಿನ ಮತ್ತು ಮುಟ್ಟು ನಿಲ್ಲುತ್ತಿರುವ ಸಂದರ್ಭದ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಸಹಾಯ ಮಾಡುತ್ತದೆ.

ಮುಖ್ಯವಾಗಿ ಯೋಗವು ದೇಹ ಮತ್ತು ಮನಸ್ಸಿನ ಅಡೆತಡೆಗಳನ್ನು ನಿವಾರಿಸಿ ಉತ್ಸಾಹಭರಿತ ಜೀವನಕ್ಕೆ ಪ್ರೇರಣೆ ನೀಡುವ ಪ್ರಕ್ರಿಯೆಯಾಗಿದೆ.

Today is 'International Yoga Day': It is compulsory to follow these guidelines while doing 'Yoga' | International Yoga Day
Share. Facebook Twitter LinkedIn WhatsApp Email

Related Posts

SHOCKING : ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿಯ ಹುಚ್ಚಾಟ.!

17/08/2025 11:44 AM1 Min Read

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

17/08/2025 11:20 AM1 Min Read

SHOCKING : ಮಂಡ್ಯದಲ್ಲಿ ಘೋರ ಘಟನೆ : ಕಳ್ಳತನ ಮಾಡಿದನ್ನು ನೋಡಿದಕ್ಕೆ ಹೋಟೆಲ್ ಮಾಲೀಕನ ಹತ್ಯೆ.!

17/08/2025 11:14 AM1 Min Read
Recent News

SHOCKING : ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿಯ ಹುಚ್ಚಾಟ.!

17/08/2025 11:44 AM

ನಕಲಿ ಪ್ರಮಾಣಪತ್ರಗಳು ಮತ್ತು ತಿದ್ದುಪಡಿಗಳನ್ನು ನೀಡುವ ನಕಲಿ ಪ್ಲಾಟ್ಫಾರ್ಮ್ಗಳ ವಿರುದ್ಧ CBSE ಎಚ್ಚರಿಕೆ

17/08/2025 11:41 AM

ಭಾರತೀಯ ರೈಲ್ವೆ ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಪ್ರಯಾಣವಿದೆಯೇ? ಇಲ್ಲಿದೆ ಸಂಪೂರ್ಣ ವಿವರ

17/08/2025 11:31 AM

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

17/08/2025 11:20 AM
State News
KARNATAKA

SHOCKING : ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿಯ ಹುಚ್ಚಾಟ.!

By kannadanewsnow5717/08/2025 11:44 AM KARNATAKA 1 Min Read

ಚಾಮರಾಜನಗರ : ಚಾಮರಾಜನಗರದ ಬಸ್ ನಿಲ್ದಾಣದಲ್ಲಿ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಚಾಮರಾಜನಗರ…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು.!

17/08/2025 11:20 AM

SHOCKING : ಮಂಡ್ಯದಲ್ಲಿ ಘೋರ ಘಟನೆ : ಕಳ್ಳತನ ಮಾಡಿದನ್ನು ನೋಡಿದಕ್ಕೆ ಹೋಟೆಲ್ ಮಾಲೀಕನ ಹತ್ಯೆ.!

17/08/2025 11:14 AM

SHOCKING : ಹುಬ್ಬಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ : ಕೊಲೆ ಶಂಕೆ.!

17/08/2025 11:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.