ಮೈಸೂರು : ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿ ಗಟ್ಟಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಆಪರೇಷನ್ ಕಮಲದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಬಿಜೆಪಿಯವರು ಈಗ ಯಾವ ಆಪರೇಷನ್ ಮಾಡ್ತಾರೆ ಎಂದರು.
ವಸತಿ ಯೋಜನೆ ಮನೆ ಹಂಚಿಕೆಗೆ ಹಣ ಪಡೆದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನೂ ಕೂಡ ಆಡಿಯೋ ಕೇಳಿದ್ದೇನೆ. ಅಕ್ರಮ ಆಗಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.