ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮಿಕ್ಸ್ ಚರ್ ತಯಾರಿಸುವ ಶೆಡ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಗಳೂರಿನ ಅಂದ್ರಳ್ಳಿಯ ಗಣಪತಿ ದೇಗುಲ ರಸ್ತೆಯಲ್ಲಿರುವ ಶೆಡ್ ನಲ್ಲಿ ಮಿಕ್ಸ್ ಚರ್ ತಯಾರಿಸುವ ವೇಳೆ ಅಗ್ನಿ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಒಂದು ಅಗ್ನಿ ಅವಘಡದಲ್ಲಿ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದೆ.ಘಟನೆ ಕುರಿತಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.