ಹಾಸನ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹಾಸನದಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹಾಸನದ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಚೇತನ್ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ, ಮಗು ಜೊತೆಗೆ ವಾಸವಾಗಿದ್ದರು, ನಿನ್ನೆ ರಾತಗ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.