ಬೆಂಗಳೂರು : ಮಾಜಿ ಸಂಸದ ಅಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚೆನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಕೋರ್ಟ್ ಐಶ್ವರ್ಯ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದೇ ದಿವಸ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಇಡಿ ನೋಟಿಸ್ ಜಾರಿ ಮಾಡಿತ್ತು.
ಹೌದು ಇತ್ತೀಚಿಗೆ ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಡಿ ಸಂಸದ ಡಿಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಕಳೆದ ಜೂನ್ 19ರಂದೆ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ಹಾಜರಾಗಿಲ್ಲ. ಹಾಗಾಗಿ ಇಂದು ಇಡಿ ವಿಚಾರಣೆಗೆ ಅವರು ಹಾಜರಾಗಲಿದ್ದಾರೆ. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.