ಬೆಂಗಳೂರು: ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.
ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು
BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?