ಹಾಸನ : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ತಾಲೂಕಿನ ನಲ್ಲಿ ಇಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಇಂದಿನಿಂದ ಜೂ.29ರವರೆಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.








