ಮಂಡ್ಯ: ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ವಿವಾಹಿತ ಪ್ರಿಯತಮೆಯನ್ನು ಹತ್ಯೆಗೈದು ಜಮೀನಿನಲ್ಲಿ ಶವ ಮುಚ್ಚಿಟ್ಟು ಯುವಕ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಮಂಡ್ಯದ ಜಿಲ್ಲೆಯ ಕರೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹತ್ಯೆಯಾದ ಮಹಿಳೆಯನ್ನು ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35) ಎಂದು ಗುರುತಿಸಲಾಗಿದೆ. ಕರೋಟಿ ಗ್ರಾಮದ ಪುನೀತ್ ಹತ್ಯೆಗೈದ ಆರೋಪಿಯಾಗಿದ್ದು, ಇನ್ಸ್ಟಾಗ್ರಾಮ್ನಲ್ಲಿ ಯುವಕನಿಗೆ ಪ್ರೀತಿ ಪರಿಚಯವಾಗಿದ್ದಳು. ಗಂಡ, ಮಕ್ಕಳಿದ್ದರೂ ಪುನೀತ್ ಜೊತೆ ಪ್ರೀತಿ ಲವ್ನಲ್ಲಿ ಬಿದ್ದಿದ್ದಳು.
ಕಳೆದ ಭಾನುವಾರ ಮೈಸೂರಿಗೆ ಒಟ್ಟಿಗೆ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದ್ದು, ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಮಹಿಳೆಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರೆ.