ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.
ಗುತ್ತಿಗೆದಾರ ಶಿವನಾಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಅಶ್ರಫ್, ನಾಗರಾಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಕೊಲೆ ಆರೋಪಿಗಳಾದ ಅಶ್ರಫ್, ನಾಗರಾಜ್ ಎಂಬುವವರನ್ನು ವಶಕ್ಕೆ ಪಡೆಯಲು ಪೊಲೀಸರು ಹಾನಗಲ್ ತಾಲೂಕಿನ ಕೊಂಡೋಜಿ ಕ್ರಾಸ್ ಬಳಿ ಹೋದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ . ಕೂಡಲೇ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ. ಗಾಯಾಳುಗಳನ್ನ ಹಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.