ಬೆಂಗಳೂರು : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಕೋರ್ಟ್ ಗೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಈಗಾಗಲೇ ಒಂದು ಪ್ರಕರಣದಲ್ಲಿ ಜಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಸೂರಜ್ ರೇವಣ್ಣ ವಿರುದ್ಧದ 2ನೇ ಎಫ್ ಐಆರ್ ನಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.