ಕಲಬುರ್ಗಿ : ಕಲ್ಬುರ್ಗಿಯಲ್ಲಿ ನಿನ್ನೆ ತಾನೆ ಪಾಟ್ನಾದಲ್ಲಿ ಢಾಬಾ ಮಾಲಿಕಾ ಸೇರಿದಂತೆ ಮೂವರನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೆ ಇದೀಗ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಹವಳಗಾ ಬಳಿ ಈ ಒಂದು ಘಟನೆ ನಡೆದಿದೆ.
ಹೌದು ಅಪರಿಚಿತ ವ್ಯಕ್ತಿಯೊಬ್ಬ, ಸಾರ್ವಜನಿಕರ ಎದುರೇ ವ್ಯಕ್ತಿ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡಿದ್ದಾನೆ. ಕತ್ತು ಕೊಯ್ದುಕೊಳ್ಳುವ ದೃಶ್ಯ ಸ್ಥಳೀಯರ ಮೊಬೈಲ್ಗಳಲ್ಲಿ ಸರಿಯಾಗಿದ್ದು, ಸದ್ಯ ಘಟನಾ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದಾರೆ. ಕತ್ತು ಕೊಯ್ದುಕೊಂಡ ಬಳಿಕ ವ್ಯಕ್ತಿಗೆ ತಕ್ಷಣ ಸ್ಥಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಪರಿಚಿತ ವ್ಯಕ್ತಿಯ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.