ಬೆಂಗಳೂರು : ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಂಬರುವ ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಹಕಾರ ಸಚಿವರಾದಂತಹ ಕೆ.ಎನ್ ರಾಜಣ್ಣ ಅವರು ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಹೌದು ಅಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು.