ಮೈಸೂರು : ಕಳೆದ 6 ತಿಂಗಳಿಂದ ಸಂಬಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಕ್ರೀಡಾ ಇಲಾಖೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಚೇರಿಯಲ್ಲಿ ಹೊರಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಳೆದ ಆರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಸಂಪರ್ಕಿಸಿದ್ದಾನೆ. ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ದೀಪಕ್ ನಾನು ತಡೆದು ಸಹ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ.
ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ ಎನ್ನಲಾಗಿದೆ. ಆತ ಹೊರಗುತ್ತಿಗೆ ನೌಕರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯಲ್ಲಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನಲ್ಲಿ ಸಂಬಳ ಹಾಕುತ್ತೇವೆ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಈ ಕುರಿತು ಸ್ಪಷ್ಟನೆ ನೀಡಿದರು.