ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ದಿನಾಂಕ: 27.06.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ’ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್.27ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಸಾಗರ / ಪಟ್ಟಣ ವ್ಯಾಪ್ತಿಯ ಎಫ್- ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-11 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಏಫ್-2 ಮಾಲೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ.
ಇನ್ನೂ ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಪನೆ, ಮಾಲೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 6:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ವರದಿ; ವಸಂತ ಬಿ ಈಶ್ವರಗೆರೆ…,
ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ
ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ